ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ.
ಸದ್ಯ ಪವಾರ್ ಅವರು ಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರ ಕಚೇರಿ ತಿಳಿಸಿದೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಆಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಉಪಮುಖ್ಯಮಂತ್ರಿಯವರ ಹೇಳಿಕೆಯಲ್ಲಿ ತಿಳಿಸಲಾಗಿದೆ.
1,41,001 ಸಕ್ರಿಯ ಪ್ರಕರಣಗಳೊಂದಿಗೆ ದೇಶದಲ್ಲಿಯೇ ಮಹಾರಾಷ್ಟ್ರ ಅತಿ ಹೆಚ್ಚಿನ ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಈವರೆಗೆ 14,60,755 ಜನರು ಗುಣಮುಖರಾಗಿದ್ದು, 43,264 ಜನರು ಸಾವಿಗೀಡಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.