ಮಹಾರಾಷ್ಟ್ರ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಇಂದು ಬೆಳಗ್ಗೆ 6.45ಕ್ಕೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದ್ದು, 5 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಎನ್‌ಸಿಎಸ್ ಮಾಹಿತಿ ನೀಡಿದೆ.
ತಕ್ಷಣಕ್ಕೆ ಯಾವುದೇ ಸಾವು– ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಇತ್ತೀಚೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪೋರ್ಟ್‌ಬ್ಲೇರ್‌ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಂಪನವು ಭೂಮಿಯ 112 ಕೀ.ಮೀಟರ್ ಆಳದಲ್ಲಿ ಸಂಭವಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.