ADVERTISEMENT

Maharashtra Election: 99 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

ಪಿಟಿಐ
Published 20 ಅಕ್ಟೋಬರ್ 2024, 11:04 IST
Last Updated 20 ಅಕ್ಟೋಬರ್ 2024, 11:04 IST
<div class="paragraphs"><p>BJP</p></div>

BJP

   

ನವದೆಹಲಿ: 288 ಸದಸ್ಯ ಬಲ ಇರುವ ಮಹಾರಾಷ್ಟ್ರ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಭಾನುವಾರ ಬಿಡುಗಡೆಗೊಳಿಸಿದೆ. ‘ನಾಗ್ಪುರ ನೈರುತ್ಯ’ ಕ್ಷೇತ್ರದಿಂದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಟಿಕೆಟ್ ನೀಡಿದೆ.

ವಂಡ್ರೆ ಪಶ್ಚಿಮ ಕ್ಷೇತ್ರದಿಂದ ಮುಂಬೈ ಬಿಜೆಪಿ ಅಧ್ಯಕ್ಷ ಆಶೀಶ್ ಸೀಲರ್, ಲೋಕಸಭಾ ಸಂಸದ ನಾರಾಯಣ ರಾಣೆ ಅವರ ಪುತ್ರ ನಿತೇಶ್ ರಾಣೆ ಕಂಕವಾಲಿ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ.

ADVERTISEMENT

ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ್ ಬವಂಕುಲೆ ಅವರು ಕಾಮತಿ ಕ್ಷೇತ್ರದಿಂದ, ಮಾಜಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಕೊಥ್ರುಡಡ್‌ನಿಂದ, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಪುತ್ರಿ ಶ್ರೀಜಯ ಚವಾಣ್ ಭೋಕರ್ ಕ್ಷೇತ್ರದಿಂದ ಅದೃಷ್ಠ ಪರೀಕ್ಷೆಗೆ ಇಳಿಯಲಿದ್ದಾರೆ.

ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಕನಿಷ್ಠ 150 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ಎದುರು ನೋಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.