ADVERTISEMENT

ಮಹಾರಾಷ್ಟ್ರ | BJP ಅಧಿಕಾರಕ್ಕೆ ತರಲು ಅದಾನಿ ಕೈವಾಡವಿದೆಯೇ? ವಿಪಕ್ಷಗಳ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ನವೆಂಬರ್ 2024, 10:12 IST
Last Updated 12 ನವೆಂಬರ್ 2024, 10:12 IST
<div class="paragraphs"><p>ಶಿವಸೇನಾ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಮತ್ತು&nbsp;ಕಾಂಗ್ರೆಸ್ ನಾಯಕ ಪವನ್ ಖೇರಾ</p></div>

ಶಿವಸೇನಾ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಮತ್ತು ಕಾಂಗ್ರೆಸ್ ನಾಯಕ ಪವನ್ ಖೇರಾ

   

–ಪಿಟಿಐ ಚಿತ್ರಗಳು

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಬಾಕಿ ಇರುವಾಗಲೇ ‘ಮಹಾಯುತಿ’ ಮತ್ತು ‘ಮಹಾ ವಿಕಾಸ ಆಘಾಡಿ’ ಮೈತ್ರಿಕೂಟಗಳ ನಡುವೆ ಆರೋಪ–ಪ್ರತ್ಯಾರೋಪ ಜೋರಾಗಿದೆ.

ADVERTISEMENT

ಮಹಾರಾಷ್ಟ್ರ ಸಚಿವ ಸಂಪುಟದ ಹಿರಿಯ ಸಚಿವರೊಬ್ಬರು ನೀಡಿದ ಸಂದರ್ಶನ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಶಿವಸೇನಾ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಗೌತಮ್ ಅದಾನಿ ಅವರ ಪಾಲ್ಗೊಳ್ಳುವಿಕೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಸಚಿವ ಸಂಪುಟದ ಹಿರಿಯ ಸಚಿವರೊಬ್ಬರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗೆ ನೀಡಿದ ಸಂದರ್ಶನದಲ್ಲಿ, ಗೌತಮ್ ಅದಾನಿಯವರು ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಹೇಗೆ ಅಧಿಕಾರಕ್ಕೆ ತರಬೇಕೆಂದು ನಿರ್ಧರಿಸಲು ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಇದು ‘ಮಹಾಯುತಿ’ ಮೈತ್ರಿಕೂಟವನ್ನು ಸರಿಪಡಿಸುವಂತಹ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

‘ಗೌತಮ್ ಅದಾನಿಯವರು ಬಿಜೆಪಿ ಅಧಿಕೃತ ಸಂಧಾನಕಾರರೇ?, ಮೈತ್ರಿಕೂಟವನ್ನು ಸರಿಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯೇ?, ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಉದ್ಯಮಿಯೊಬ್ಬರು ಏಕೆ ಇಷ್ಟು ಉತ್ಸಾಹದಿಂದ ಮತ್ತು ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ?’ ಎಂದು ಪ್ರಿಯಾಂಕಾ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದು, ‘ಮೋದಿ ಮತ್ತು ಅದಾನಿ ನಡುವಿನ ಈ ಸಂಬಂಧದ ಬಗ್ಗೆ ಹೆಚ್ಚು ಆಘಾತಕಾರಿ ಏನೂ ಇಲ್ಲ ಎಂದು ನೀವು ಭಾವಿಸಿದಾಗ ನಿರ್ಲಜ್ಜತೆಯ ಹೊಸ ಉದಾಹರಣೆ ಹೊರಬರುತ್ತದೆ. ಒಬ್ಬ ಉದ್ಯಮಿಯನ್ನು ಅಧಿಕೃತವಾಗಿ ರಾಜಕೀಯ ಪಕ್ಷವೊಂದರ ಭಾಗವಾಗಲು ಹೇಗೆ ಅನುಮತಿಸಬಹುದು? ಚುನಾಯಿತ ಸರ್ಕಾರಗಳನ್ನು ಪದಚ್ಯುತಗೊಳಿಸಲು ಚರ್ಚೆಗಳು ನಡೆಸಬಹುದಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಅದಾನಿ ಇದ್ದ ಸಭೆಗಳಲ್ಲಿ ಭಾಗವಹಿಸಿದ್ದಾಗಿ ಹೇಳಿಕೊಳ್ಳುವ ವಿಡಿಯೊಂದನ್ನು ಪವನ್ ಖೇರಾ ಹಂಚಿಕೊಂಡಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್‌ 20ರಂದು ಮತದಾನ ನಡೆಯಲಿದೆ. ಮೂರು ದಿನಗಳ ಬಳಿಕ (ನವೆಂಬರ್‌ 23ರಂದು) ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿಯು ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಮತ್ತು ಅಜಿತ್‌ ಪವಾರ್ ಅವರ ಎನ್‌ಸಿಪಿಯೊಂದಿಗೆ ಆಡಳಿತಾರೂಢ 'ಮಹಾಯುತಿ' ಮೈತ್ರಿಕೂಟದಲ್ಲಿದೆ.

ಕಾಂಗ್ರೆಸ್‌, ಮಾಜಿ ಸಿಎಂ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ, ಶರದ್‌ ಪವಾರ್‌ ಅವರ ಎನ್‌ಸಿಪಿ ಇರುವ 'ಮಹಾ ವಿಕಾಸ ಆಘಾಡಿ' ಕೂಟವು ಮಹಾಯುತಿಗೆ ಸವಾಲೊಡ್ಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.