ADVERTISEMENT

ಮಹಾರಾಷ್ಟ್ರ: ಔರಂಗಾಬಾದ್‌, ಒಸ್ಮಾನಾಬಾದ್‌ ಜಿಲ್ಲೆಗಳ ಮರುನಾಮಕರಣಕ್ಕೆ ಅಧಿಸೂಚನೆ

ಪಿಟಿಐ
Published 16 ಸೆಪ್ಟೆಂಬರ್ 2023, 8:17 IST
Last Updated 16 ಸೆಪ್ಟೆಂಬರ್ 2023, 8:17 IST
ಏಕನಾಥ ಶಿಂದೆ
ಏಕನಾಥ ಶಿಂದೆ   

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್‌ ಮತ್ತು ಒಸ್ಮಾನಾಬಾದ್‌ ಜಿಲ್ಲೆಗಳ ಹೆಸರನ್ನು ಕ್ರಮವಾಗಿ ಛತ್ರಪತಿ ಸಂಭಾಜಿನಗರ ಮತ್ತು ಧಾರಾಶಿವ ಎಂದು ಮರುನಾಮಕರಣ ಮಾಡುವ ಕುರಿತು ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಸರ್ಕಾರವು ಅಧಿಸೂಚನೆ ಹೊರಡಿಸಿದೆ.

ಕಳೆದ ವರ್ಷ ಜುಲೈನಲ್ಲಿ ಶಿಂದೆ ಸರ್ಕಾರವು ಔರಂಗಾಬಾದ್ ಮತ್ತು ಒಸ್ಮಾನಾಬಾದ್ ನಗರಗಳನ್ನು ಕ್ರಮವಾಗಿ ಛತ್ರಪತಿ ಸಂಭಾಜಿನಗರ ಮತ್ತು ಧಾರಾಶಿವ ಎಂದು ಮರುನಾಮಕರಣ ಮಾಡಲು ನಿರ್ಧರಿಸಿತ್ತು.

2022ರ ಜೂನ್ 29 ರಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಹಿಂದಿನ ಮಹಾ ವಿಕಾಸ್ ಅಘಾಡಿ (MVA) ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಅನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.

ADVERTISEMENT

ಆದರೆ, ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ಸ್ಥಳಗಳ ಹೆಸರನ್ನು ಮರುನಾಮಕರಣ ಮಾಡುವ ಠಾಕ್ರೆ ನೇತೃತ್ವದ ನಿರ್ಧಾರವು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿದ್ದರು.

ಕಳೆದ ವರ್ಷ ಜುಲೈನಲ್ಲಿ ಶಿಂದೆ ಸರ್ಕಾರವು ಔರಂಗಾಬಾದ್ ಮತ್ತು ಒಸ್ಮಾನಾಬಾದ್ ನಗರಗಳನ್ನು ಕ್ರಮವಾಗಿ ಛತ್ರಪತಿ ಸಂಭಾಜಿನಗರ ಮತ್ತು ಧಾರಾಶಿವ ಎಂದು ಮರುನಾಮಕರಣ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿತು.

ಎಂವಿಎ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಔರಂಗಾಬಾದ್ ಅನ್ನು ಸಂಭಾಜಿನಗರ ಎಂದು ಮರುನಾಮಕರಣ ಮಾಡಲಾಗಿತ್ತು, ಆದರೆ ಶಿಂದೆ ಸರ್ಕಾರವು ಅದಕ್ಕೆ ‘ಛತ್ರಪತಿ’ ಪೂರ್ವಪ್ರತ್ಯಯವನ್ನು ಸೇರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.