ಮುಂಬೈ: ಸುಲಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
ನವೆಂಬರ್ 12 ರಂದು ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮುಖ್ಯಮಂತ್ರಿ ಉದ್ದತ್ ಠಾಕ್ರೆ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾದರು. ಇದೇ ದಿನ ಅಮಾನತು ಆದೇಶವನ್ನು ಅನುಮೋದಿಸಿದ್ದಾರೆ.
ಮಹಾರಾಷ್ಟ್ರದ ಗೃಹ ರಕ್ಷಣಾ ದಳದ ಮುಖ್ಯಸ್ಥರಾಗಿ ನೇಮಕವಾದ ಬಳಿಕ ಪರಮ್ ಬೀರ್ ಸಿಂಗ್, ಕಳೆದ ಆರು ತಿಂಗಳಿನಿಂದ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಕರ್ತವ್ಯಕ್ಕೆ ಗೈರಾಗಿರುವುದನ್ನು ಪರಿಗಣಿಸಿ ಶಿಸ್ತು ಕ್ರಮಕ್ಕೂ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇವನ್ನೂ ಓದಿ
*ಸುಲಿಗೆ ಪ್ರಕರಣ: ಪೊಲೀಸರ ಮುಂದೆ ಹಾಜರಾದ ಪರಮ್ ಬೀರ್ ಸಿಂಗ್
*ಉಗ್ರ ಕಸಬ್ ಮೊಬೈಲ್ ಅನ್ನು ನಾಶಪಡಿಸಿದ್ದ ಪರಮ್ ಬೀರ್ ಸಿಂಗ್: ನಿವೃತ್ತ ಅಧಿಕಾರಿ
*ಮುಂಬೈನ ಅಪರಾಧ ವಿಭಾಗದ ಅಧಿಕಾರಿಗಳಿಂದ ಪರಮ್ ಬೀರ್ ಸಿಂಗ್ ವಿಚಾರಣೆ
*ಪರಮ್ ಬೀರ್ ಸಿಂಗ್ಗೆ ಜೀವ ಬೆದರಿಕೆ ಆಘಾತಕಾರಿ: ಮಹಾರಾಷ್ಟ್ರ ಗೃಹ ಸಚಿವ
*ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ಗೆ ಬಂಧನದಿಂದ ರಕ್ಷಣೆ
*ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ‘ಘೋಷಿತ ಅಪರಾಧಿ’: ಮುಂಬೈ ಕೋರ್ಟ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.