ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಬುಧವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಅವರು, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದು ಬರೆದುಕೊಂಡಿದ್ದರು.
ಸದ್ಯ ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ರಾಜ್ಯಪಾಲರಿಗೆ ಕೋವಿಡ್ ಕಾಣಿಸಿಕೊಂಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಬಂಡಾಯ ಶಾಸಕರ ಸಭೆ ಇಂದು: ಶಿವಸೇನಾದ ಬಂಡಾಯ ಶಾಸಕರ ಗುಂಪಿನ ನಾಯಕ ಏಕನಾಥ ಶಿಂಧೆ ಅವರು ಇಂದು ಮಧ್ಯಾಹ್ನ 12ಕ್ಕೆ ಶಾಸಕರ ಸಭೆ ಕರೆದಿದ್ದಾರೆ. ಮುಂದಿನ ನಡೆಯ ಬಗ್ಗೆ ಚರ್ಚಿಸಲು ಗುವಾಹಟಿಯ ಹೋಟೆಲ್‌ನಲ್ಲೇ ಸಭೆ ಕರೆದಿರುವುದಾಗಿ ವರದಿಯಾಗಿದೆ.
ಏಕನಾಥ ಶಿಂಧೆ ಅವರ ನಡೆ ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.