ADVERTISEMENT

ಅನಿಲ್‌ ದೇಶಮುಖ್ ವಿರುದ್ಧ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 17:01 IST
Last Updated 30 ಮಾರ್ಚ್ 2021, 17:01 IST
ಅನಿಲ್ ದೇಶ್‌ಮುಖ್
ಅನಿಲ್ ದೇಶ್‌ಮುಖ್   

ಮುಂಬೈ: ಗೃಹ ಸಚಿವ ಅನಿಲ್‌ ದೇಶಮುಖ್ ವಿರುದ್ಧದ ಆರೋಪಕ್ಕೆ ಸಂಬಂದಿಸಿ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸಿದೆ.

ಬಾಂಬೆ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೈಲಾಸ್‌ಚಂದ್‌ ಚಂಡಿವಾಲ್ ಅವರು ಸಚಿವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಲಿದ್ದಾರೆ ಎಂದು ಸರ್ಕಾರ ಹೇಳಿದೆ.

ಪ್ರತಿ ತಿಂಗಳೂ ₹100 ಕೋಟಿ ಲಂಚ ಸಂಗ್ರಹಿಸುವಂತೆ ಅಮಾನತುಗೊಂಡಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಅನಿಲ್ ದೇಶಮುಖ್ ಸೂಚಿಸಿದ್ದರು ಎಂದು ಐಪಿಎಸ್ ಅಧಿಕಾರಿ ಪರಮ್ ವೀರ್ ಸಿಂಗ್ ಆರೋಪಿಸಿದ್ದರು. ಇದು ರಾಷ್ಟ್ರಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ದೇಶಮುಖ್‌ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಪರಮ್ ವೀರ್ ಸಿಂಗ್ ಬಾಂಬೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.