ADVERTISEMENT

ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಮೇ 2022, 13:16 IST
Last Updated 22 ಮೇ 2022, 13:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಭಾನುವಾರ ಕಡಿತಗೊಳಿಸಿದೆ.

ಪ್ರತಿ ಲೀಟರ್‌ಗೆ ಪೆಟ್ರೋಲ್‌ಗೆ ₹2.08 ಮತ್ತು ಡೀಸೆಲ್‌ಗೆ ₹1.44 ಕಡಿತ ಮಾಡಿದೆ.

ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ₹2,500 ಕೋಟಿ ನಷ್ಟ ಉಂಟಾಗಲಿದೆ ಎಂದು ಮಹಾರಾಷ್ಟ್ರ ಸರ್ಕಾರ ಮಾಹಿತಿ ನೀಡಿದೆ.‌

ADVERTISEMENT

ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ ಕ್ರಮವಾಗಿ ₹8 ಮತ್ತು ₹6 ಕಡಿತ ಮಾಡಿ ಶನಿವಾರ ಆದೇಶ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.