ADVERTISEMENT

Maharashtra Poll: ಮತಗಟ್ಟೆಯಲ್ಲೇ ಮೃತಪಟ್ಟ ಬೀಡ್ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ

ಏಜೆನ್ಸೀಸ್
Published 20 ನವೆಂಬರ್ 2024, 13:31 IST
Last Updated 20 ನವೆಂಬರ್ 2024, 13:31 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೀಡ್‌: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬೀಡ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ವತಂತ್ರ ಅಭ್ಯರ್ಥಿಯೊಬ್ಬರು ಮತಗಟ್ಟೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ADVERTISEMENT

ಬಾಳಾಸಾಹೇಬ್‌ ಶಿಂದೆ ಮೃತ ಅಭ್ಯರ್ಥಿ.

ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆದಿದೆ. ನ.23 (ಶನಿವಾರ) ಮತ ಎಣಿಕೆ ನಡೆಯಲಿದೆ.

ಬೀಡ್‌ ಜಿಲ್ಲೆಯ ಛತ್ರಪತಿ ಶಾಹು ವಿದ್ಯಾಲಯದ ಮತಗಟ್ಟೆಯಲ್ಲಿ ಮತದಾನ ಮಾಡಿ ಹೊರಬರುತ್ತಿದ್ದಂತೆ ಬಾಲಾಸಾಹೇಬ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೀಡ್‌ ವಿಧಾನಸಭಾ ಕ್ಷೇತ್ರ ಒಂದು ಕಾಲದಲ್ಲಿ ಎನ್‌ಸಿಪಿ ಶರದ್‌ ಪವಾರ್ ಅವರ ಹಿಡಿತದಲ್ಲಿತ್ತು. ಆದರೆ ಪಕ್ಷ ಇಬ್ಬಾಗವಾದ ನಂತರ, ಅಜಿತ್ ಪವಾರ್ ಎನ್‌ಸಿಪಿಯ ಒಂದು ಬಣವನ್ನು ಪ್ರತಿನಿಧಿಸಿದ್ದು, ಅದು ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.