ಮುಂಬೈ: ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನವಾಗಿರುವ ಶಂಕೆ ವ್ಯಕ್ತವಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಶಿವಸೇನಾ ಶಾಸಕರ ತುರ್ತು ಸಭೆ ಕರೆದಿದ್ದಾರೆ.
ಇಂದು (ಮಂಗಳವಾರ) ಮಧ್ಯಾಹ್ನದ ಒಳಗೆ ಶಿವಸೇನಾ ಶಾಸಕರ ಸಭೆ ನಡೆಯುವ ಸಾಧ್ಯತೆ ಇದೆ. ಎಲ್ಲ ಶಾಸಕರೂ ಕಡ್ಡಾಯವಾಗಿ ಸಭೆಯಲ್ಲಿ ಹಾಜರಿರಬೇಕು ಎಂದು ಉದ್ಧವ್ ಸೂಚಿಸಿದ್ದಾರೆ.
ಸೋಮವಾರ ನಡೆದ ಪರಿಷತ್ ಚುನಾವಣೆಯಲ್ಲಿ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಾಂತ್ ಹಂಡೊರೆಗೆ ಸೋಲಾಗಿತ್ತು.
ಈ ಮಧ್ಯೆ, ಶಿವಸೇನಾ ಶಾಸಕರ ಒಂದು ಗುಂಪು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗಿದೆ.
ಮಹಾರಾಷ್ಟ್ರ ವಿಧಾನ ಪರಿಷತ್ತಿನ 10 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದ ಎಲ್ಲ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಆಡಳಿತಾರೂಢ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಐವರು ಮಾತ್ರ ಜಯಗಳಿಸಿದ್ದರು. ಹೀಗಾಗಿ ಅಡ್ಡಮತದಾನ ಶಂಕೆ ವ್ಯಕ್ತವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.