ನಾಸಿಕ್: ಶಿರಡಿ ಸಾಯಿಬಾಬಾ ಮತ್ತು ಸಮಾಜ ಸುಧಾರಕ ಜ್ಯೋತಿ ಬಾಫುಲೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಲಪಂಥೀಯ ನಾಯಕ ಸಂಭಾಜಿ ಭಿಡೆ ವಿರುದ್ಧ ನಾಸಿಕ್‌ನಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ನಾಸಿಕ್ ಮೂಲದ ಸಾಮಾಜಿಕ ಸಂಘಟನೆಯ ಅಧ್ಯಕ್ಷರು ಆಗಸ್ಟ್ 1ರಂದು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪೊಲೀಸರು ಅಮರಾವತಿಗೆ ಎಫ್‌ಐಆರ್ ಅನ್ನು ವರ್ಗಾಯಿಸಿದ್ದಾರೆ.
‘ಸಂಭಾಜಿ ಭಿಡೆ, ಜುಲೈ 30ರಂದು ಮಹಾತ್ಮ ಫುಲೆ, ರಾಜಾ ರಾಮ್‌ಮೋಹನ್ ರಾಯ್ ಮತ್ತು ಶಿರಡಿ ಸಾಯಿಬಾಬಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿಂದನಾತ್ಮಕ ಮತ್ತು ಕೆಟ್ಟ ಭಾಷೆ ಬಳಕೆ ಮಾಡಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
ಮಹಾತ್ಮ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಳೆದ ವಾರವೂ ಶ್ರೀ ಶಿವ ಪ್ರತಿಷ್ಠಾನ ಹಿಂದೂಸ್ತಾನ್ ಸಂಘಟನೆಯ ಸಂಸ್ಥಾಪಕ ಭಿಡೆ ವಿರುದ್ಧ ಅಮರಾವತಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು ಎಂದು ಪೊಲೀಸರು ತಿಳಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.