ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆದಿದ್ದು, ಬುಧವಾರ ಮಧ್ಯಾಹ್ನ ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದೆ.
ಈ ಮಧ್ಯೆ, ಶಿವಸೇನಾ ಶಾಸಕ ಮತ್ತು ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ತಮಗೆ 40 ಶಾಸಕರ ಬೆಂಬಲ ಇದೆ ಎಂದು ತಿಳಿಸಿದ್ದಾರೆ.
ಸೂರತ್‌ನಿಂದ ಶಿಂಧೆ ಮತ್ತು ಬೆಂಬಲಿಗ ಶಾಸಕರು, ಚಾರ್ಟರ್ಡ್ ವಿಮಾನದಲ್ಲಿ ಗುವಾಹಟಿಗೆ ತೆರಳಿದ್ದಾರೆ.
ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.
ಇದರ ಬೆನ್ನಲ್ಲೇ, ಬುಧವಾರ ಮಧ್ಯಾಹ್ನ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರದ ಮುಂದಿನ ನಡೆ ಕುತೂಹಲ ಕೆರಳಿಸಿದೆ. ಅಲ್ಲದೆ, ಶಿಂಧೆ ಅವರು ರಾಜ್ಯಪಾಲರನ್ನು ಭೇಟಿಯಾಗಿ ವಿಶ್ವಾಸಮತಯಾಚನೆಗೆ ಮುಂದಾಗುತ್ತಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.