ಗುವಾಹಟಿ:ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿರುವಬಂಡಾಯ ಶಾಸಕರು ಗುವಾಹಟಿಯ ಐಷಾರಾಮಿ ಹೋಟೆಲ್‌ನಲ್ಲಿ ಬೀಡುಬಿಟ್ಟಿದ್ದು, ಸಮಯ ಕಳೆಯಲು ಒಳಾಂಗಣ ಕ್ರೀಡೆಗಳನ್ನು ಆಡುತ್ತಿದ್ದಾರೆ.
'ಹಲವು ಸಭೆಗಳನ್ನು ನಡೆಸುತ್ತಿರುವುದನ್ನು ಹೊರತುಪಡಿಸಿ, ಗುವಾಹಟಿಯಲ್ಲಿ ಬೇರೆ ಯಾವುದೇ ಗಂಭೀರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿಲ್ಲ. ಸಮಯ ಕಳೆಯಲು ಅವರು (ಬಂಡಾಯ ಶಾಸಕರು) ಚೆಸ್, ಲುಡೊ ಸೇರಿದಂತೆ ಒಳಾಂಗಣ ಆಟಗಳನ್ನು ಆಡುತ್ತಿದ್ದಾರೆ' ಎಂದು ಶಾಸಕರೊಂದಿಗೆ ಸಂಪರ್ಕದಲ್ಲಿರುವ ವ್ಯಕ್ತಿಯೊಬ್ಬರು ಹೆಸರು ಬಹಿರಂಗಪಡಿಸದಂತೆ ಸೂಚಿಸಿ ನೀಡಿದ್ದಾರೆ.
ಗುಂಪಿನ ನಾಯಕ ಏಕನಾಥ ಶಿಂಧೆ ಅವರು ಶಾಸಕರಿಗೆ ಹೋಟೆಲ್‌ನಿಂದ ಹೊರಗೆ ಹೋಗದಂತೆ ನೋಡಿಕೊಳ್ಳುತ್ತಿದ್ದಾರೆ.
ಅಸ್ಸಾಂನ ಬಿಜೆಪಿ ಶಾಸಕರು, ನಾಯಕರುಹಾಗೂ ಸಚಿವರು ನಿಯಮಿತವಾಗಿ ಹೋಟೆಲ್‌ಗೆ ಭೇಟಿ ನೀಡಿ, ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಶಿವಸೇನಾದ ಕನಿಷ್ಠ 38 ಶಾಸಕರು ಮತ್ತು 10 ಪಕ್ಷೇತರರು ಏಕನಾಥ ಶಿಂಧೆ ನೇತೃತ್ವದಲ್ಲಿ ಅಸ್ಸಾಂನ ಗುವಾಹಟಿಯ ಹೋಟೆಲ್‌ವೊಂದರಲ್ಲಿ ಬೀಡುಬಿಟ್ಟಿದ್ದಾರೆ. ಇದರಿಂದಾಗಿ ಶಿವಸೇನಾ, ಕಾಂಗ್ರೆಸ್ ಹಾಗೂ ಎನ್‌ಸಿಪಿ ಮೈತ್ರಿಕೂಟದ 'ಮಹಾ ವಿಕಾಸ ಆಘಾಡಿ' ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ.
ಇವನ್ನೂ ಓದಿ
*‘ಮಹಾ‘ ಬಂಡಾಯ: ಭಿನ್ನರು ಜುಲೈ 12ರವರೆಗೆ ನಿರಾಳ
*ಉದ್ಧವ್ ಠಾಕ್ರೆ ಪರ ಕೇವಲ 15 ಶಾಸಕರು, ನಾಲ್ವರು ಸಚಿವರು
*ಮಹಾರಾಷ್ಟ್ರ ಬಿಕ್ಕಟ್ಟು ‘ಸುಪ್ರೀಂ’ಗೆ: ಭಿನ್ನರಿಗೆ ಶಿವಸೇನಾ ಬೆದರಿಕೆ
*ಆಳ–ಅಗಲ: ಶಿವಸೇನಾದಲ್ಲಿ ತಳಮಳ ಸಿದ್ಧಾಂತ ಬದಲಿನ ಸಂಕಟ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.