ಮುಂಬೈ: ಸದ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್ ಅವರ ಪತ್ನಿ ಅಮೃತಾ ಫಡಣವೀಸ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಿಎಂ ಉದ್ಧವ್ ಠಾಕ್ರೆ ಅವರನ್ನು ಅಣಕಿಸಿ ‘ಒಬ್ಬ ದುಷ್ಟ ರಾಜ’ ("Ek 'Tha' Kapati Raja...) ಎಂದು ಅಮೃತಾ ಅವರು ಟ್ವೀಟಿಸಿ ನಂತರ ಅದನ್ನು ಅಳಿಸಿ ಹಾಕಿದ್ದಾರೆ ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.
ಮಹಾರಾಷ್ಟ್ರದಲ್ಲಿಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಅಮೃತಾ ಅವರು ಮಾಡಿದ್ದ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಮಧ್ಯೆ, ಶಿವಸೇನಾ ಶಾಸಕ ಮತ್ತು ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ತಮಗೆ 40 ಶಾಸಕರ ಬೆಂಬಲ ಇದೆ ಎಂದು ತಿಳಿಸಿರುವುದು ಮಹಾರಾಷ್ಟ್ರದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ.
ಉದ್ಧವ್ ಠಾಕ್ರೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಶಿಂಧೆ, ರಾಜ್ಯದಲ್ಲಿ ಬಿಜೆಪಿಯೊಂದಿಗಿನ ಮೈತ್ರಿಯನ್ನು ಪುನಃಸ್ಥಾಪಿಸಿ ಆಡಳಿತ ನಡೆಸುವಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮಹಾರಾಷ್ಟ್ರ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆದಿದ್ದು, ಬುಧವಾರ ಮಧ್ಯಾಹ್ನ ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದೆ.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.