ಧುಲೆ: ಮುಂಬರುವ ಮಹಾರಾಷ್ಟ್ರ ಚುನಾವಣೆಯ ಫಲಿತಾಂಶವು ರಾಜ್ಯ ಮಾತ್ರವಲ್ಲದೇ ದೇಶದ ಭವಿಷ್ಯವನ್ನೂ ನಿರ್ಧರಿಸುತ್ತದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ತಿಳಿಸಿದ್ದಾರೆ.
ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾವಂತ ಶಾಸಕರನ್ನು ಆಯ್ಕೆ ಮಾಡುವಂತೆ ಜನರನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಮಹಾರಾಷ್ಟ್ರದ ಫಲಿತಾಂಶವು ಕೇವಲ ರಾಜ್ಯದ ಭವಿಷ್ಯ ಮಾತ್ರವಲ್ಲದೇ, ಇಡೀ ದೇಶದ ರಾಜಕೀಯವನ್ನೇ ಬದಲಾಯಿಸಲಿದೆ. ಹೀಗಾಗಿ ಈ ಚುನಾವಣೆ ಐತಿಹಾಸಿಕ ಚುನಾವಣೆಯಾಗಲಿದೆ ಎಂದು ಯಾದವ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡರೆ ಬಳಿಕ ದೆಹಲಿಯಲ್ಲಿ ಕೇಂದ್ರದಲ್ಲಿರುವ ಎನ್‌ಡಿಎ ಮೈತ್ರಿ ಸರ್ಕಾರವು ಪತನಗೊಳ್ಳಲಿದೆ. ಇದೂ ಉತ್ತರ ಪ್ರದೇಶದ ಸರ್ಕಾರದ ಮೇಲೂ ಪರಿಣಾಮ ಬೀರಲಿದೆ ಎಂದು ಯಾದವ್ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳನ್ನು ಸೋಲಿಸುವುದರೊಂದಿಗೆ ಉತ್ತರ ಪ್ರದೇಶದ ಸರ್ಕಾರದ ಮೇಲೆ ಪರಿಣಾಮ ಬೀರಲಿದೆ. ಕೇಂದ್ರ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಮುಂದಿನ ದಿನಗಳಲ್ಲಿ ಪತನಗೊಳ್ಳಲಿದೆ. ಮಹಾರಾಷ್ಟ್ರದ ಕೈಗಾರಿಕೆಗಳನ್ನು ಗುಜರಾತ್‌ಗೆ ಸ್ಥಳಾಂತರಿಸುವ ಮೂಲಕ ರಾಜ್ಯದ ಅಭಿವೃದ್ಧಿ ಕ್ಷೀಣಿಸಿದೆ ಎಂದು ಯಾದವ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.