ಥಾಣೆ: ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದಲ್ಲಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಥಾಣೆ ಜಿಲ್ಲೆಯ 18 ಕ್ಷೇತ್ರಗಳಲ್ಲಿ ಈವರೆಗೆ ₹27.68 ಕೋಟಿ ಮೌಲ್ಯದ ನಗದು, ಮದ್ಯ ಮತ್ತು ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾಡಳಿತವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಅಧಿಕಾರಿಗಳು ₹15.59 ಕೋಟಿ ನಗದು, ₹3.01 ಕೋಟಿ ಮೌಲ್ಯದ ಮದ್ಯ,₹1.79 ಕೋಟಿ ಮೌಲ್ಯದ ಮಾದಕ ದ್ರವ್ಯಗಳು, ₹23.26 ಲಕ್ಷ ಮೌಲ್ಯದ ಆಭರಣಗಳು ಮತ್ತು ಬೆಲೆಬಾಳುವ ವಸ್ತುಗಳು ಹಾಗೂ ₹7.05 ಕೋಟಿ ಮೌಲ್ಯದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 15 ರಂದು ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ.
ಮಹಾರಾಷ್ಟ್ರದಲ್ಲಿ 288 ಸದಸ್ಯಬಲದ ವಿಧಾನಸಭೆಗೆ ನ.20ರಂದು ಮತದಾನ ನಡೆಯಲಿದೆ. ನ.23ಕ್ಕೆ ಮತಎಣಿಕೆ ಜರುಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.