ADVERTISEMENT

ಮಹಾರಾಷ್ಟ್ರ ಚುನಾವಣೆ: 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಪಿಟಿಐ
Published 26 ಅಕ್ಟೋಬರ್ 2024, 13:55 IST
Last Updated 26 ಅಕ್ಟೋಬರ್ 2024, 13:55 IST
.
.   

ಮುಂಬೈ/ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ 23 ಅಭ್ಯರ್ಥಿಗಳ ಹೆಸರನ್ನು ಒಳಗೊಂಡ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದೆ.

ಶಾಸಕ ಕೈಲಾಶ್ ಗೋರಂಠ್ಯಾಲ್ ಅವರನ್ನು ಜಲನಾದಿಂದ ಮತ್ತು ಪಕ್ಷದ ನಾಯಕ ಸುನಿಲ್ ಕೇಡರ್ ಅವರ ಪತ್ನಿ ಅನುಜಾ ಅವರನ್ನು ಸಾವನೇರ್‌ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಪಕ್ಷದ ಚುನಾವಣಾ ಸಮಿತಿಯು ಅಭ್ಯರ್ಥಿಗಳನ್ನು ಭೇಟಿ ಮಾಡಿ, ಚರ್ಚಿಸಿದ ನಂತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ADVERTISEMENT

ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 48 ಮಂದಿಗೆ ಟಿಕೆಟ್‌ ನೀಡಿತ್ತು. ಎರಡನೇ ಪಟ್ಟಿ ಸೇರಿದಂತೆ ಒಟ್ಟು 71 ಮಂದಿಗೆ ಟಿಕೆಟ್‌ ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.