ಪುಣೆ: ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ರಸ್ತೆಗಳು ಜಲಾವೃತಗೊಂಡಿರುವುದರಿಂದ,ಮುಂಬೈ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.ಕೊಲ್ಹಾಪುರದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ನಿಲ್ಲಿಸಿದ್ದಾರೆ.
ಕೊಲ್ಹಾಪುರ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪಂಚಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಜಿಲ್ಲೆಯ ವಿಪತ್ತು ನಿರ್ವಹಣಾ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿನ ಸಂಚಾರ ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಕೊಲ್ಹಾಪುರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಬಾಲ್ಕವಾಡೆ, ‘ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕಾಗಲ್ ಎಂಬ ಹಳ್ಳಿಯ ಬಳಿ ರಸ್ತೆ ಮುಳುಗಿದೆ. ಈ ರಸ್ತೆಯ ಮೂಲಕವೇ ವಾಹನಗಳು ಕೊಲ್ಹಾಪುರ ತಲುಪಬೇಕು. ಈ ಕಾರಣದಿಂದ ಕೊಲ್ಹಾಪುರ ಕಡೆಯಿಂದ ನೆರೆಯ ರಾಜ್ಯಕ್ಕೆ ಸಂಚರಿಸುವ ಎಲ್ಲ ವಾಹನಗಳನ್ನು ಸ್ಥಗಿತಗೊಳಿಸಿದ್ದೇವೆ‘ ಎಂದು ಅವರು ತಿಳಿಸಿದರು.
ಕೊಲ್ಹಾಪುರ ಜಿಲ್ಲೆಯಲ್ಲಿ ಸುರಿಯುತ್ತಿರವ ಭಾರಿ ಮಳೆಯಿಂದಾಗಿ, 114 ಸೇತುವೆಗಳು ಮುಳುಗಿವೆ.47 ಹಳ್ಳಿಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.