ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಗುರುವಾರ5,218 ಹೊಸ ಪ್ರಕರಣಗಳು ಪತ್ತೆಯಾಗಿದೆ. ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 79,50,240 ಹಾಗೂ ಮೃತರ ಸಂಖ್ಯೆ 1,47,893ಕ್ಕೇರಿದೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ಮುಂಬೈನಲ್ಲಿ 2,479 ಪ್ರಕರಣ ವರದಿಯಾಗಿವೆ. ಹಿಂದಿನ ದಿನಕ್ಕೆ ಹೋಲಿಸಿದರೆ ದೈನಂದಿನ ಪ್ರಕರಣಗಳು ಶೇಕಡಾ 60 ರಷ್ಟು ಏರಿಕೆಯಾಗಿದೆ. ಬುಧವಾರ 3,260 ಪ್ರಕರಣಗಳು ವರದಿಯಾಗಿದ್ದು, ಮೂವರು ಮೃತಪಟ್ಟಿದ್ದರು. ಸಕ್ರಿಯ ಪ್ರಕರಣಗಳ ಸಂಖ್ಯೆ 24,867 ಕ್ಕೇರಿದೆ.
ಥಾಣೆ ಮತ್ತು ಪುಣೆ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದೆ. 4,989 ರೋಗಿಗಳು ಮನೆ ಅಥವಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಗುಣಮುಖರ ಪ್ರಮಾಣ ಶೇ 97.83 ಹಾಗೂ ಮರಣ ಶೇ 1.86ರಷ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.