ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮತ ಎಣಿಕೆ ಮುಂದುವರಿದಿದ್ದು, ಬಿಜೆಪಿ ನೇತೃತ್ವದ ಮಹಾಯುತಿಯು ಅಧಿಕಾರ ಹಿಡಿಯಲು ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ.
ಇದರೊಂದಿಗೆ ಮಹಾ ವಿಕಾಸ ಅಘಾಡಿ ಮೈತ್ರಿಯು ತೀವ್ರ ಹಿನ್ನಡೆ ಅನುಭವಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್, 'ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.
'ಇದನ್ನು ಜನಾದೇಶ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಬಿಜೆಪಿಯ ಬಣ್ಣ ಬಯಲಾಗಿದ್ದು, ಎರಡು ದಿನಗಳ ಹಿಂದೆಯಷ್ಟೇ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ. ಇದರಿಂದ ಗಮನ ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆ. ಬಹಳ ಹಿಂದೆಯೇ ಈ ತಂತ್ರ ರೂಪಿಸಲಾಗಿತ್ತು' ಎಂದು ಅವರು ಆರೋಪಿಸಿದ್ದಾರೆ.
288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ಸಂಖ್ಯೆ 145 ಆಗಿದೆ.
ಬೆಳಿಗ್ಗೆ 11 ಗಂಟೆಯ ಟ್ರೆಂಡ್ ವೇಳೆಗೆ ಮಹಾಯುತಿ 220, ಮಹಾ ವಿಕಾಸ ಅಘಾಡಿ 55 ಮತ್ತು ಇತರರು 13 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.