ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ಸ್ಥಳೀಯ ಬಿಜೆಪಿ ನಾಯಕ ಹಾಗೂ ಇತರೆ ಮೂವರು ಕೆಟ್ಟ ಪದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
57 ವರ್ಷದ ಬುಡಕಟ್ಟು ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಾಲ್ಘರ್ ಜಿಲ್ಲಾ ಘಟಕಕ್ಕೆ ಹೊಸದಾಗಿ ನೇಮಕಗೊಂಡಿರುವ ಭರತ್ ರಜಪೂತ್ ಮತ್ತು ಇತರೆ ಮೂವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ರಜಪೂತ್ ಸಹೋದರ ಜಗದೀಶ್, ವಿಶಾಲ್ ನಂದಲಾಸ್ಕರ್ ಮತ್ತು ರಾಜೇಶ್ ಠಾಕೂರ್ ವಿರುದ್ಧ ಭಾರತ ದಂಡ ಸಂಹಿತೆಯ ಸೆಕ್ಷನ್ 323, 506(2) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ) ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ ದೂರುದಾರ, ನವಪಾದ ಗ್ರಾಮದ ನಿವಾಸಿಯಾಗಿದ್ದು, ಆದಿವಾಸಿ-ವಾರ್ಲಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.