ಠಾಣೆ: ಎರಡು ವರ್ಷಗಳ ಹಿಂದೆ ಬೌದ್ಧ ಧರ್ಮದ ಕುರಿತಾಗಿ ಅವಹೇಳನಕಾರಿ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದ ಪ್ರಕರಣ ಎದುರಿಸುತ್ತಿರುವ ಮರಾಠಿ ನಟಿಕೇತಕಿ ಚಿತಳೆ ಅವರನ್ನು ಠಾಣೆ ನ್ಯಾಯಾಲಯವು ಜೂ.7ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಿದೆ.
2020ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ(ದೌರ್ಜನ್ಯ ನಿಯಂತ್ರಣ) ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಕಳೆದ ವಾರವಷ್ಟೇ ಚಿತಳೆ ಅವರನ್ನುಕಳೆದ ಗುರುವಾರ ಬಂಧಿಸಲಾಗಿತ್ತು. ಈ ಹಿಂದೆ ಅವರಿಗೆ ಸ್ಥಳೀಯ ನ್ಯಾಯಾಲಯ ಮೇ 24ರವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿತ್ತು. ಈ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೀಗಾಗಿ ಅವರನ್ನು ಜೂ.7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಆಕೆಯ ವಕೀಲರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.