ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 72ನೇ ಪುಣ್ಯತಿಥಿ ಪ್ರಯುಕ್ತ ದೇಶದಾದ್ಯಂತ ವಿವಿಧ ವಿಧಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ದೆಹಲಿಯ ರಾಜಘಾಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ,ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕೇಂದ್ರ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಸೇರಿದಂತೆ ಅನೇಕ ಗಣ್ಯರು ಗಾಂಧಿ ಸ್ಮಾರಕಕ್ಕೆಪುಷ್ಪನಮನ ಸಲ್ಲಿಸಿದರು.
ಗುಜರಾತಿನ ಸಾಬರಮತಿ ಅಶ್ರಮದಲ್ಲಿ ಸರ್ವ ಧರ್ಮ ಪ್ರಾರ್ಥನೆ, ಭಕ್ತಿಗೀತೆಗಳ ಗಾಯನ ಜರುಗಿತು.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟ್ವಿಟರ್‌ನಲ್ಲಿ ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿಯನ್ನು ಸ್ಮರಿಸಿದ್ದಲ್ಲದೆ, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ ಅಂಗವಾಗಿ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್‌ಕಲಾಕೃತಿಗಳನ್ನು ಬಿಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.