ADVERTISEMENT

ಚುನಾವಣಾ ಪ್ರಚಾರ | ದೇಣಿಗೆಗಾಗಿ ಟೆಂಡರ್‌ನಲ್ಲಿ ಅನುಕೂಲ: ಕಾಂಗ್ರೆಸ್‌ ಆರೋಪ

ಪಿಟಿಐ
Published 18 ಅಕ್ಟೋಬರ್ 2024, 16:01 IST
Last Updated 18 ಅಕ್ಟೋಬರ್ 2024, 16:01 IST
ಜೈರಾಮ್ ರಮೇಶ್‌
ಜೈರಾಮ್ ರಮೇಶ್‌   

ನವದೆಹಲಿ: ಚುನಾವಣಾ ಪ್ರಚಾರಕ್ಕೆ ದೇಣಿಗೆ ಪಡೆಯಲಿಕ್ಕಾಗಿ ಕೆಲವೊಂದು ಕಂಪನಿಗಳಿಗೆ ಟೆಂಡರ್‌ನಲ್ಲಿ ಅನುಕೂಲ ಮಾಡಿಕೊಡಲಾಗಿದೆ ಎಂದು ಕಾಂಗ್ರೆಸ್‌ ಶುಕ್ರವಾರ ಆರೋಪಿಸಿದೆ.

ಮಹಾರಾಷ್ಟ್ರದಲ್ಲಿನ ಆಡಳಿತಾರೂಢ ಮಹಾಯುತಿ ಸರ್ಕಾರದ ಈ ನಿರ್ಧಾರದಿಂದ ತೆರಿಗೆದಾರರ ₹10,903 ಕೋಟಿ ನಷ್ಟವಾಗಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್‌ ಹೇಳಿದ್ದಾರೆ.

‘ಇದು ಪ್ರೀಪೇಯ್ಡ್‌ ಚಂದಾ, ಪೋಸ್ಟ್‌ ಪೇಯ್ಡ್‌ ದಂಧೆ’ಗೆ ಹೋಲಿಕೆಯಾಗುತ್ತದೆ ಎಂದು ಎಐಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಈ ಬಗ್ಗೆ ಉತ್ತರಿಸುತ್ತಾರೆಯೇ ಎಂದು ಪ್ರತಿಪಕ್ಷಗಳು ಪ್ರಶ್ನಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.