ಪುಣೆ: ‘ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟವು ಜಾತಿ ಹಾಗೂ ಧರ್ಮವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಜಾತಿ ಮುಖ್ಯವಾಗಬಾರದು’ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಹೇಳಿದರು.
ಭಾನುವಾರ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮಾಯಾವತಿ ಪ್ರಚಾರ ನಡೆಸಿದರು. ರ್‍ಯಾಲಿಯೊಂದರಲ್ಲಿ ಮಾತನಾಡಿದ ಅವರು, ‘ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ತಿರಸ್ಕರಿಸಿ ನಮ್ಮ ಪಕ್ಷಕ್ಕೆ ಮತ ನೀಡಿ. ನಾವು ಎಲ್ಲ ಸಮುದಾಯದವರಿಗೂ ನ್ಯಾಯ ಒದಗಿಸುತ್ತೇವೆ’ ಎಂದರು.
‘ಮಹಾಯುತಿ’ ಮೈತ್ರಿಕೂಟವು ಮೀಸಲಾತಿಯನ್ನೂ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತದೆ. ಉದ್ದೇಶಪೂರ್ವಕವಾಗಿಯೇ ಕೆಲವು ಪಕ್ಷಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಮತಗಳು ಒಡೆದುಹೋಗಿ, ಆಡಳಿತ ಪಕ್ಷಕ್ಕೆ ಅನುಕೂಲವಾಗಲಿ ಎನ್ನುವುದೇ ಇದರ ಹಿಂದಿನ ಉದ್ದೇಶ’ ಎಂದರು.
ಮಮತಾ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ‘ಒಂದೇ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡ, ಭ್ರಷ್ಟಾಚಾರದಲ್ಲಿ ಮುಳುಗಿರುವ , ಓಲೈಕೆ ರಾಜಕಾರಣ ಮಾಡುವ ಪಕ್ಷ ಮಮತಾ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ)’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.