ನವದೆಹಲಿ: ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆಯಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಕೇಳಿರುವ ಪ್ರಶ್ನೆಗಳಿಗೆ ಟಿಎಂಸಿ ನಾಯಕಿ ಹಾಗೂ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ ಅವರು ಪ್ರತಿಕ್ರಿಯೆ ಸಲ್ಲಿಸಿದ್ದಾರೆ.
ಮಹುವಾ ಅವರು ಸಲ್ಲಿಸಿರುವ ಪ್ರತಿಕ್ರಿಯೆಯನ್ನು ಪರಿಶೀಲಿಸಿ, ಲೋಕಪಾಲ್‌ಗೆ ವರದಿ ಸಲ್ಲಿಸಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಮಹುವಾ ವಿರುದ್ಧ ಸಿಬಿಐ ತನಿಖೆಗೆ ಲೋಕಪಾಲ್ ಆದೇಶಿಸಿತ್ತು.
ಮಹುವಾ ಅವರು ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.