ಬೆಂಗಳೂರು: ಮಕರ ಸಂಕ್ರಮಣದ ಅಂಗವಾಗಿ ದೇಶದ ವಿವಿಧ ದೇಗುಲಗಳಲ್ಲಿ ಭಕ್ತರು ಪ್ರಾರ್ಥನೆ ಸಲ್ಲಿಸಿದರು. ಪವಿತ್ರ ನದಿಗಳಲ್ಲಿ ಪುಣ್ಯ ಸ್ನಾನ ಮಾಡಿದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಗೋರಕನಾಥ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಗೋರಕನಾಥನಿಗೆ ’ಖಿಚಡಿ’ ಅರ್ಪಿಸಲು ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.
ಉತ್ತರಾಖಂಡದ ಹರಿದ್ವಾರದಲ್ಲಿ ಹಾಗೂ ಉತ್ತರ ಪ್ರದೇಶದ ವಾರಾಣಸಿ ಹಾಗೂ ಪ್ರಯಾಗರಾಜ್‌ನಲ್ಲಿ ಗಂಗಾ ನದಿಯಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿದರು.
ಮಕರವಿಳಕ್ಕು ಹಬ್ಬಕ್ಕಾಗಿ ತೆರದ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದೇಗುಲದಲ್ಲಿ ಭಕ್ತರ ದಂಡೇ ಸೇರಿದೆ.
ತಮಿಳುನಾಡಿನ ವಿವಿಧ ಭಾಗಗಳಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭವಾಗಿದೆ. ಸೋಮವಾರ ಮುಂಜಾನೆಯಿಂದಲೇ ಎತ್ತುಗಳ ಆರೋಗ್ಯ ತಪಾಸಣೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.