ನವದೆಹಲಿ: ದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಫ್ತು ಹೆಚ್ಚಿಸಲು ಮತ್ತು ರಾಷ್ಟ್ರದ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ 'ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮವು ಪ್ರಮುಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.
10ನೇ ‘ಮೇಕ್ ಇನ್ ಇಂಡಿಯಾ’ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಈ ಆಂದೋಲನವನ್ನು ಯಶಸ್ವಿಗೊಳಿಸಲು ಅವಿರತವಾಗಿ ಶ್ರಮಿಸುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ರಾಷ್ಟ್ರದ ಆರ್ಥಿಕತೆ ಉತ್ತೇಜಿಸುವ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು, ರಫ್ತು ಅನ್ನು ಮತ್ತಷ್ಟು ಬಲಪಡಿಸಲು ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮ ಸಹಕಾರಿಯಾಗಿದೆ. 140 ಕೋಟಿ ಭಾರತೀಯರು ಸಾಮೂಹಿಕ ಸಂಕಲ್ಪದೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ನಾವೀನ್ಯತೆಯ ಶಕ್ತಿಯು ವೃದ್ಧಿಯಾಗಲಿದೆ ಎಂದು ಹೇಳಿದ್ದಾರೆ
ದೇಶದಲ್ಲಿ ಸಾಧ್ಯವಿರುವ ಎಲ್ಲಾ ಕ್ಷೇತ್ರಗಳಲ್ಲಿ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಉತ್ತೇಜಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಎಲ್ಲರೂ ಒಟ್ಟಾಗಿ ಆತ್ಮನಿರ್ಭರ ಹಾಗೂ ವಿಕಸಿತ ಭಾರತವನ್ನು ನಿರ್ಮಿಸಬೇಕೆಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.