ನವದೆಹಲಿ: ದೇಶದ ಎಲ್ಲಾ ವೈದ್ಯಕೀಯ ಶಿಕ್ಷಣಸಂಸ್ಥೆಗಳ ಪರಿಶೀಲನಾ ವರದಿಗಳು ಆರು ವಾರಗಳ ಒಳಗಾಗಿ ಸಾರ್ವಜನಿಕ ವಲಯಕ್ಕೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರೀಯ ಮಾಹಿತಿ ಆಯೋಗವು ಭಾರತೀಯವೈದ್ಯಕೀಯ ಮಂಡಳಿಗೆ (ಎಂಸಿಐ)ನಿರ್ದೇಶನ ನೀಡಿದೆ.
ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಅನುಮತಿ ನೀಡುವ ಸಲುವಾಗಿ ಎಂಸಿಐ ಪರಿಶೀಲನೆ ನಡೆಸಿ ವರದಿ ನೀಡುತ್ತದೆ.
ಇಂತಹ ವರದಿಗಳಲ್ಲಿ ಅಕ್ರಮ ನಡೆದಿದೆ ಎಂದು ಹಲವು ಪ್ರಕರಣಗಳು ದಾಖಲಾಗಿದ್ದು, ಇವುಗಳ ಕುರಿತು ಸಿಬಿಐ ವಿಚಾರಣೆ ನಡೆಸುತ್ತಿದೆ. ವರದಿಗಳಲ್ಲಿಪಾರದರ್ಶಕತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ನಿರ್ದೇಶನ ಪ್ರಮುಖ ಹೆಜ್ಜೆಯಾಗಿದೆ.
‘ಸಾರ್ವಜನಿಕ ವಲಯಕ್ಕೆ ಲಭ್ಯವಾಗದಂತೆ ಪರಿಶೀಲನಾ ವರದಿಗಳನ್ನು ಬಚ್ಚಿಡುವುದರಿಂದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಕಡಿಮೆಯಾಗಲಿದೆ’ ಎಂದು ಮಾಹಿತಿ ಆಯೋಗದ ಆಯುಕ್ತ ಯಶೋವರ್ಧನ್ ಆಜಾದ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.