ಕೊಚ್ಚಿ: ಈಚೆಗೆ ನಿಧನರಾದ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಮಲಯಾಳ ಚಿತ್ರನಟ ವಿನಾಯಕನ್ ಅವರು ವಿವಾದಕ್ಕೆ ಗುರಿಯಾಗಿದ್ದಾರೆ.
‘ಉಮ್ಮನ್ ಚಾಂಡಿ ಯಾರು? ಮತ್ತು ಅವರ ನಿಧನಕ್ಕೆ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಿದ್ದು ಯಾಕೆ?’ ಎಂದು ವಿನಾಯಕನ್ ಅವರು ಹೇಳಿರುವ ವಿಡಿಯೊ ಫೇಸ್‌ಬುಕ್‌ನಲ್ಲಿ ಹರಿದಾಡಿತ್ತು.
ಕೋಟಯಂ ಜಿಲ್ಲೆಯ ಪುದುಪಳ್ಳಿಯಲ್ಲಿ ನಡೆದ ಚಾಂಡಿ ಅವರ ಪಾರ್ಥಿವ ಶರೀರದ ಮೆರವಣಿಗೆಗೆ ಮಾಧ್ಯಮಗಳು ಹೆಚ್ಚಿನ ಮಹತ್ವ ನೀಡಿ ಯಾಕೆ ಪ್ರಸಾರ ಮಾಡಿವೆ ಎಂದೂ ಅವರು ಪ್ರಶ್ನಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ.
ಈ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾದ ಬಳಿಕ ವಿನಾಯಕನ್ ಅವರು ವಿಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದಿದ್ದಾರೆ.
ಚಾಂಡಿ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನ ಮಾಡಿರುವ ವಿನಾಯಕನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿ ಕಾಂಗ್ರೆಸ್ ಪೊಲೀಸರಿಗೆ ದೂರು ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.