ADVERTISEMENT

ಮಾಲೆಗಾಂವ್‌ ಸ್ಫೋಟ ಪ್ರಕರಣ: ಪುರೋಹಿತ್‌ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಪಿಟಿಐ
Published 30 ಮಾರ್ಚ್ 2023, 11:29 IST
Last Updated 30 ಮಾರ್ಚ್ 2023, 11:29 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಮಾಲೆಗಾಂವ್ ಸ್ಫೋಟ (2008) ಪ್ರಕರಣದ ಆರೋಪಿ ಲೆಫ್ಟಿನೆಂಟ್‌ ಕರ್ನಲ್‌ ಪ್ರಸಾದ್ ಶ್ರೀಕಾಂತ್‌ ಪುರೋಹಿತ್‌ ಅವರು ಪ್ರಕರಣದಿಂದ ಬಿಡುಗಡೆಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಈ ಸಂಬಂಧ ತಮ್ಮ ಮೇಲ್ಮನವಿಯನ್ನು ತಿರಸ್ಕರಿಸಿದ್ದ ಬಾಂಬೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಪುರೋಹಿತ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಪುರೋಹಿತ್‌ ಸೇರಿದಂತೆ ಆರು ಮಂದಿ ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದು, ಈ ಎಲ್ಲ ಆರೋಪಿಗಳೂ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

ADVERTISEMENT

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್‌ ರಾಯ್‌ ಮತ್ತು ಮನೋಜ್‌ ಮಿಶ್ರಾ ಅವರ ಪೀಠವು ಹೈಕೋರ್ಟ್‌ ಆದೇಶದಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿತು.

ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ಮಾಲೆಗಾಂವ್‌ನಲ್ಲಿ 2008ರ ಸೆಪ್ಟೆಂಬರ್‌ 29ರಂದು ನಡೆದ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.