ನವದೆಹಲಿ: ‘ರಾಹುಲ್ ಗಾಂಧಿಯವರು ಪಕ್ಷದ ನೇತೃತ್ವ ವಹಿಸಿಕೊಳ್ಳಬೇಕು. ಅಧ್ಯಕ್ಷರಾಗಬೇಕು ಎಂಬುದು ಎಲ್ಲ ಕಾರ್ಯಕರ್ತರಂತೆ ನನ್ನ ಅಭಿಪ್ರಾಯವೂ ಆಗಿದೆ’ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ (ಸಿಡಬ್ಲ್ಯುಸಿ) ನಡೆಯುತ್ತಿದ್ದು, ಪಕ್ಷದ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17ಕ್ಕೆ ಚುನಾವಣೆ ನಿಗದಿಯಾಗಿದೆ ಎಂದು ವರದಿಯಾಗಿದೆ. ಈ ಮಧ್ಯೆ, ಖರ್ಗೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಬೇಕು. ಅವರು ಪಕ್ಷವನ್ನು ಒಗ್ಗೂಡಿಸುವುದರ ಜತೆಗೆ ಇನ್ನಷ್ಟು ಬಲಪಡಿಸಬಲ್ಲರು ಎಂದು ಖರ್ಗೆ ಹೇಳಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.
ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ರಾಹುಲ್ ಗಾಂಧಿ ಅವರನ್ನು ಒತ್ತಾಯಿಸಲಾಗುವುದು. ಪಕ್ಷವನ್ನು ಮುನ್ನಡೆಸಲು ಬಯಸುವವರು ದೇಶದಾದ್ಯಂತ ಪರಿಚಿತರಾಗಿರಬೇಕು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಪಶ್ಚಿಮ ಬಂಗಾಳದಿಂದ ಗುಜರಾತ್‌ವರೆಗೆ ಬೆಂಬಲ ಹೊಂದಿರಬೇಕು ಎಂದು ಖರ್ಗೆ ಶನಿವಾರ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.