ಕೋಲ್ಕತ್ತ:ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಬೇರೆ ರಾಜ್ಯಗಳಿಗೆ ವರ್ಗಾಯಿಸುವಂತೆ ಕೋರಿ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ನಂದಿಗ್ರಾಮ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆಮಮತಾ ಬ್ಯಾನರ್ಜಿ ಅವರು ಸಲ್ಲಿಸಿದ್ದ ತಕರಾರು
ಅರ್ಜಿಯ ವಿಚಾರಣೆಗೆ ಒಪ್ಪಿಕೊಂಡಿರುವ ಕೋಲ್ಕತ್ತ ಹೈಕೋರ್ಟ್, ಈ ಸಂಬಂಧ ಶಾಸಕ ಸುವೇಂದು ಅಧಿಕಾರಿಗೆ ನೋಟಿಸ್ ನೀಡುವಂತೆ ನಿರ್ದೇಶನ ನೀಡಿತ್ತು.
ನ್ಯಾಯಮೂರ್ತಿ ಶಂಪಾ ಸರ್ಕಾರ್ ಅವರು, ‘ಮಮತಾ ಅವರ ಅರ್ಜಿಯ ವಿಚಾರಣೆ ಆಗಸ್ಟ್ 12 ರಂದು ನಡೆಯಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡುವಂತೆ’ ನಿರ್ದೇಶನ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.