ADVERTISEMENT

‘ಯಸ್‌ ಚಂಡಮಾರುತ‘ದಿಂದ 2.21 ಲಕ್ಷ ಹೆಕ್ಟೆರ್ ಬೆಳೆ ಹಾನಿ: ಮಮತಾ ಬ್ಯಾನರ್ಜಿ

ನೆರೆ ಪೀಡಿತ ಪ್ರದೇಶಗಳ ಪುನರ್ ಅಭಿವೃದ್ಧಿಗೆ ₹20 ಸಾವಿರ ಕೋಟಿ ನೀಡುವಂತೆ ಕೇಂದ್ರಕ್ಕೆ ಮನವಿ

ಪಿಟಿಐ
Published 1 ಜೂನ್ 2021, 5:38 IST
Last Updated 1 ಜೂನ್ 2021, 5:38 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತಾ: ಕಳೆದ ವಾರ ಪಶ್ಚಿಮ ಬಂಗಾಳ ರಾಜ್ಯಕ್ಕೆ ಅಪ್ಪಳಿಸಿದ ‘ಯಸ್‌’ ಚಂಡಮಾರುತದಿಂದಾಗಿ ಒಟ್ಟು ₹20 ಸಾವಿರ ಕೋಟಿಗಳಷ್ಟು ನಷ್ಟವಾಗಿದ್ದು, 2.21 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಚಂಡಮಾರುತದಿಂದಾಗಿ 2 ಲಕ್ಷಕ್ಕೂ ಹೆಚ್ಚು ಜನರು ನಿರ್ವಸಿತರಾಗಿದ್ದಾರೆ. ನಿರಾಶ್ರಿತರಿಗಾಗಿ ರಾಜ್ಯ ಸರ್ಕಾರ ಸುಮಾರು 1,200 ಪರಿಹಾರ ಕೇಂದ್ರಗಳನ್ನು ತೆರೆದಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಚಂಡಮಾರುತದಿಂದ ಉಂಟಾಗಿರುವ ಹಾನಿ ಕುರಿತು ಮಮತಾ ಅವರು ಮೇ 28ರಂದು ಪ್ರಧಾನಿಯವರಿಗೆ ವರದಿ ಸಲ್ಲಿಸಿದ್ದು, ಹಾನಿಗೊಳಗಾದ ಪ್ರದೇಶಗಳ ಪುನರ್ ಅಭಿವೃದ್ಧಿಗಾಗಿ ₹20 ಸಾವಿರ ಕೋಟಿ ನೀಡಬೇಕೆಂದು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.