ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಣೆಗೆ ತೀವ್ರವಾಗಿ ಪೆಟ್ಟುಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ಮಮತಾ ಅವರ ಹಣೆಗೆ ಪೆಟ್ಟಾಗಿ ರಕ್ತ ಸೋರುತ್ತಿರುವ ಮತ್ತು ಆಸ್ಪತ್ರೆಗೆ ದಾಖಲಾಗಿರುವ ಫೋಟೊವನ್ನು ಹಂಚಿಕೊಂಡಿದ್ದು, ‘ನಮ್ಮ ನಾಯಕಿಗಾಗಿ ಪ್ರಾರ್ಥಿಸಿ’ ಎಂದು ಬರೆದುಕೊಂಡಿದೆ.
ಮಮತಾ ಅವರಿಗೆ ಹೇಗೆ ಪೆಟ್ಟಾಯಿತು, ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಹೇಗಿದೆ ಎನ್ನುವ ಮಾಹಿತಿ ಬಹಿರಂಗಗೊಂಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.