ADVERTISEMENT

ವಿಪಕ್ಷಗಳು ಕರೆ ನೀಡಿರುವ ಸಿಎಎ ವಿರೋಧಿ ಸಭೆಯಲ್ಲಿ ಭಾಗಿಯಾಗಲ್ಲ: ಮಮತಾ ಬ್ಯಾನರ್ಜಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2020, 12:47 IST
Last Updated 9 ಜನವರಿ 2020, 12:47 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೊಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರೋಧಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಜನವರಿ 13ರಂದು ನಡೆಯಲಿರುವಸಭೆಯಲ್ಲಿ ತಾನುಭಾಗಿಯಾಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಎಡಪಕ್ಷಗಳು ಕೊಳಕು ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿದ ಮಮತಾ, ಎನ್‌ಆರ್‌ಸಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾನೊಬ್ಬಳೇ ಹೋರಾಡುತ್ತೇನೆ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ವಿಪಕ್ಷವಾಗಿರುವುದರಿಂದ ನಾನು ಜನವರಿ 13ರಂದು ನಡೆಯಲಿರುವ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಮಮತಾ ಹೇಳಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಮೊದಲು ಹೋರಾಟ ಆರಂಭಿಸಿದ್ದು ನಾನು. ಸಿಎಎ ಮತ್ತು ಎನ್‌ಆರ್‌ಸಿ ಹೆಸರಿನಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ನಡೆಸುತ್ತಿರುವುದು ಚಳTrinamool Congressವಳಿ ಅಲ್ಲದಾಂದಲೆ.

ಸಭೆಗೆ ಗೈರು ಹಾಜರಾಗುವ ನನ್ನ ನಿರ್ಧಾರವನ್ನುವಿಪಕ್ಷದಲ್ಲಿರುವ ಇತರ ಪಕ್ಷಗಳು ನನ್ನನ್ನುಕ್ಷಮಿಸಬೇಕು. ಅದೇ ವೇಳೆ ರಾಜ್ಯದಲ್ಲಿ ನಿನ್ನೆ ನಡೆದ ಘಟನೆಯಿಂದಾಗಿ ನನಗೆ ಯಾವುದೇ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ ಮಮತಾ ಬ್ಯಾನರ್ಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.