ADVERTISEMENT

ರಾಷ್ಟ್ರಪತಿ ಚುನಾವಣೆ: 15ರಂದು ಪ್ರತಿಪಕ್ಷಗಳ ಸಭೆ ಕರೆದ ಮಮತಾ ಬ್ಯಾನರ್ಜಿ

ಪಿಟಿಐ
Published 11 ಜೂನ್ 2022, 14:06 IST
Last Updated 11 ಜೂನ್ 2022, 14:06 IST
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ   

ಕೋಲ್ಕತ್ತ: ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರ ರೂಪಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದೇ 15ರಂದು ನವದೆಹಲಿಯಲ್ಲಿ ಪ್ರತಿಪಕ್ಷಗಳ ಸಭೆ ಕರೆದಿದ್ದಾರೆ. ಸಭೆಗೆ ಬರುವಂತೆ ಎಲ್ಲ ಪ್ರತಿಪಕ್ಷಗಳ ನಾಯಕರಿಗೆ ಅವರು ಶನಿವಾರ ಪತ್ರ ಬರೆದಿದ್ದಾರೆ.

‘ರಾಷ್ಟ್ರಪತಿ ಚುನಾವಣೆ ಬಗ್ಗೆ ಚರ್ಚಿಸಲು ಎಲ್ಲಾ ಪ್ರಗತಿಪರ ವಿರೋಧ ಪಕ್ಷಗಳಿಗೆ ಬ್ಯಾನರ್ಜಿ ಅವರು ಪತ್ರ ಬರೆದಿದ್ದು, ಜೂನ್ 15ರಂದು ಮಧ್ಯಾಹ್ನ 3ಕ್ಕೆ ನವದೆಹಲಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸುವಂತೆ ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ಮತ್ತು ನಾಯಕರನ್ನು ಬ್ಯಾನರ್ಜಿ ಅವರು ಸಂಪರ್ಕಿಸಿ ಮಾತನಾಡಿದ್ದಾರೆ’ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ಜುಲೈ 18 ರಂದು ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.