ಕೋಲ್ಕತ್ತ : ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಒಗ್ಗೂಡುವ ಸಂಬಂಧ ಬಿಹಾರದ ಪಟ್ನಾದಲ್ಲಿ ಜೂನ್ 12ರಂದು ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಂದೇ ವೇದಿಕೆಯಡಿ ತರಲು ಮುಂದಾಗಿದ್ದಾರೆ. ಇದರ ಭಾಗವಾಗಿಯೇ ಅವರ ಉಸ್ತುವಾರಿಯಲ್ಲಿ ಪಟ್ನಾದಲ್ಲಿ ಸಭೆ ನಿಗದಿಯಾಗಿದೆ.
‘ಮಮತಾ ಅವರು ಸಭೆಯಲ್ಲಿ ಭಾಗವಹಿಸಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಅಗತ್ಯವಿರುವ ವಿರೋಧ ಪಕ್ಷಗಳ ಒಗ್ಗಟ್ಟು ಮತ್ತು ಅದನ್ನು ಬಲಪಡಿಸುವ ಬಗ್ಗೆ ತಮ್ಮ ಸಲಹೆ ನೀಡಲಿದ್ದಾರೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಟಿಎಂಸಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಕಳೆದ ತಿಂಗಳು ನಿತೀಶ್ ಕುಮಾರ್ ಕೋಲ್ಕತ್ತದಲ್ಲಿ ಮಮತಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಈ ವೇಳೆ ಜಯಪ್ರಕಾಶ್ ನಾರಾಯಣ ಅವರ ಹೋರಾಟವನ್ನು ಸ್ಮರಿಸಿದ್ದ ದೀದಿ, ಪ್ರತಿಪಕ್ಷಗಳ ಸಭೆ ಆಯೋಜನೆಗೆ ಸಲಹೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.