ADVERTISEMENT

ಕೇಂದ್ರದಿಂದ ಅನುದಾನ ಬಿಡುಗಡೆಗಾಗಿ ಮಮತಾ ಬ್ಯಾನರ್ಜಿ 48 ತಾಸಿನ ಧರಣಿ

ಪಿಟಿಐ
Published 3 ಫೆಬ್ರುವರಿ 2024, 4:59 IST
Last Updated 3 ಫೆಬ್ರುವರಿ 2024, 4:59 IST
<div class="paragraphs"><p>ಮಮತಾ ಬ್ಯಾನರ್ಜಿ</p></div>

ಮಮತಾ ಬ್ಯಾನರ್ಜಿ

   

(ಪಿಟಿಐ)

ಕೋಲ್ಕತ್ತ: ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಅನುದಾನದ ಬಿಡುಗಡೆಗಾಗಿ ಒತ್ತಾಯಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆರಂಭಿಸಿರುವ ಧರಣಿ, ಶುಕ್ರವಾರ ರಾತ್ರಿಯಿಡೀ ಮುಂದುವರಿಯಿತು.

ADVERTISEMENT

ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಮುಂದೆ ಶುಕ್ರವಾರ ಮಧ್ಯಾಹ್ನ ಆರಂಭಿಸಿದ ಧರಣಿ ಚಳಿಯನ್ನು ಲೆಕ್ಕಿಸದೇ ರಾತ್ರಿಯಿಡೀ ಮುಂದುವರಿಯಿತು. ಮಮತಾ ಅವರನ್ನು ತೃಣಮೂಲ ಕಾಂಗ್ರೆಸ್‌ ಪಕ್ಷದ (ಟಿಎಂಸಿ) ಮುಖಂಡರು ಹಾಗೂ ಕಾರ್ಯಕರ್ತರು ಬೆಂಬಲಿಸಿದರು.

48 ತಾಸಿನ ಧರಣಿ ಭಾನುವಾರದವರೆಗೆ ಮುಂದುವರಿಯಲಿದೆ ಎಂದು ಟಿಎಂಸಿ ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನರೇಗಾ ಸೇರಿದಂತೆ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ರಾಜ್ಯದ ಖಾತೆಗೆ ಸಾವಿರಾರು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಬಾಕಿಯಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.