ADVERTISEMENT

RG Kar: ಮುಷ್ಕರ ಕೈಬಿಡುವಂತೆ ಕಿರಿಯ ವೈದ್ಯರಿಗೆ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯ

ಪಿಟಿಐ
Published 19 ಅಕ್ಟೋಬರ್ 2024, 10:42 IST
Last Updated 19 ಅಕ್ಟೋಬರ್ 2024, 10:42 IST
<div class="paragraphs"><p>ಮಮತಾ ಬ್ಯಾನರ್ಜಿ</p></div>

ಮಮತಾ ಬ್ಯಾನರ್ಜಿ

   

(ಪಿಟಿಐ ಚಿತ್ರ)

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಕಿರಿಯ ವೈದ್ಯರನ್ನು ಒತ್ತಾಯಿಸಿದ್ದಾರೆ.

ADVERTISEMENT

ವೈದ್ಯರ ಬೇಡಿಕೆಗಳ ಕುರಿತು ಸೋಮವಾರ ಭೇಟಿ ಮಾಡಿ ಸಮಗ್ರವಾಗಿ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇಲ್ಲಿನ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು ಮತ್ತು ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯ ಬೇಡಿಕೆಯನ್ನಿಟ್ಟು ಕಿರಿಯ ವೈದ್ಯರು ಧರಣಿ ನಿರತರಾಗಿದ್ದಾರೆ.

ಧರಣಿ ಸ್ಥಳಕ್ಕೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಇಂದು (ಶನಿವಾರ) ಭೇಟಿ ನೀಡಿದರು.

ಈ ವೇಳೆ ದೂರವಾಣಿ ಮೂಲಕ ಮಾತನಾಡಿರುವ ಮಮತಾ, 'ಎಲ್ಲರಿಗೂ ಪ್ರತಿಭಟಿಸುವ ಹಕ್ಕು ಇದೆ. ಆದರೆ ಇದರಿಂದ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರಬಾರದು' ಎಂದು ಮುಷ್ಕರ ಕೈಬಿಡುವಂತೆ ಒತ್ತಾಯಿಸಿದ್ದಾರೆ.

'ಹೆಚ್ಚಿನ ಬೇಡಿಕೆಗಳು ಈಡೇರಿವೆ. ಉಳಿದ ಬೇಡಿಕೆಗಳನ್ನು ಈಡೇರಿಸಲು ಮೂರು-ನಾಲ್ಕು ತಿಂಗಳ ಕಾಲಾವಕಾಶವನ್ನು ನೀಡಿ' ಎಂದು ಹೇಳಿದ್ದಾರೆ.

'ದಯವಿಟ್ಟು ಮುಷ್ಕರವನ್ನು ಕೈಬಿಡಿ. ಕೆಲವು ಬೇಡಿಕೆಗಳ ಈಡೇರಿಕೆಗೆ ನೀತಿಗಳಲ್ಲಿ ಬದಲಾವಣೆಯಾಗಬೇಕಿದೆ. ನಮ್ಮಿಂದ ಸಾಧ್ಯವಾಗುವ ಎಲ್ಲ ಸಹಕಾರ ನೀಡಲಾಗುವುದು' ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.