ADVERTISEMENT

ಅತ್ಯಾಚಾರ ಪ್ರಕರಣ: ಅತ್ಯಂತ ಕಠಿಣ ಕಾನೂನು ಜಾರಿಗೊಳಿಸುವಂತೆ ಮೋದಿಗೆ ಮಮತಾ ಪತ್ರ

ಪಿಟಿಐ
Published 22 ಆಗಸ್ಟ್ 2024, 13:45 IST
Last Updated 22 ಆಗಸ್ಟ್ 2024, 13:45 IST
<div class="paragraphs"><p>ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ&nbsp;ಹಾಗೂ ಪ್ರಧಾನಿ ನರೇಂದ್ರ ಮೋದಿ  </p></div>

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ

   

ಕೋಲ್ಕತ್ತ: ಅತ್ಯಾಚಾರ ಎಸಗಿದ ಅಪರಾಧಿಗಳಿಗೆ ಅತ್ಯಂತ ಕಠಿಣ ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಪತ್ರ ಬರೆದಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರ ಅಲಪನ್ ಬಂಡೋಪಾಧ್ಯಾಯ ಮಾಹಿತಿ ನೀಡಿದ್ದಾರೆ.

ADVERTISEMENT

ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿ ಮೇಲಿನ ಅತ್ಯಾಚಾರ– ಹತ್ಯೆ ಸಂಬಂಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಮತಾ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಇಂತಹ ಕೃತ್ಯ ಎಸಗಲು ಭಯ ಹುಟ್ಟಿಸುವಂತಹ ಶಿಕ್ಷೆಯನ್ನು ಜಾರಿಗೊಳಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ದೇಶದಲ್ಲಿ ದಿನಕ್ಕೆ ಸುಮಾರು 90 ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ ಎಂದು ಮಮತಾ ಕಳವಳ ವ್ಯಕ್ತಪಡಿಸಿದ್ದಾರೆ.

‘ದೇಶದಲ್ಲಿ ವರದಿಯಾಗುತ್ತಿರುವ ಅತ್ಯಾಚಾರ ಪ್ರಕರಣಗಳು ನಮ್ಮೆಲ್ಲರ ಮನಸ್ಸನ್ನು ಅಲುಗಾಡಿಸಿದೆ. ಈ ಭಯಾನಕ ಕೃತ್ಯಗಳು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಮಕ್ಕಳು ಹಾಗೂ ಮಹಿಳೆಯರಿಗೆ ಸುರಕ್ಷಿತ ಸಮಾಜ ಕಲ್ಪಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ‘ ಎಂದು ಹೇಳಿದ್ದಾರೆ.

ಅತ್ಯಾಚಾರ ಪ್ರಕರಣಗಳನ್ನು ನ್ಯಾಯಾಲಯಗಳಲ್ಲಿ ತ್ವರಿತವಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆಯೂ ಹಾಗೂ ವಿಚಾರಣಾ ಅವಧಿ 15 ದಿನಗಳಲ್ಲಿ ಮುಕ್ತಾಯಗೊಂಡು ತೀರ್ಪು ಪ್ರಕಟಿಸಬೇಕೆಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.