ADVERTISEMENT

ಇಂಡಿಗೋ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

ಪಿಟಿಐ
Published 23 ಜೂನ್ 2024, 5:44 IST
Last Updated 23 ಜೂನ್ 2024, 5:44 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಚೆನ್ನೈ: ಜೂನ್ 18 ರಂದು ಮುಂಬೈಗೆ ತೆರಳುತ್ತಿದ್ದ ಇಂಡಿಗೋ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪದ ಮೇಲೆ ತಮಿಳುನಾಡಿನ ತಂಜಾವೂರು ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿ. ಪ್ರಸನ್ನ ಬಂಧಿತ ವ್ಯಕ್ತಿ. ಕೇಂದ್ರ ಅಪರಾಧ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ADVERTISEMENT

ಆರೋಪಿಯು ಚೆನ್ನೈ-ಮುಂಬೈ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಇಲ್ಲಿನ ಏರ್‌ಲೈನ್‌ನ ಗ್ರಾಹಕ ಸೇವಾ ಕೇಂದ್ರಕ್ಕೆ ಚಾಟ್‌ ಮೂಲಕ ಹುಸಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಾಗಿತ್ತು.‌

ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.