ನವದೆಹಲಿ: ದೆಹಲಿ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಗೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗುವ ಮೂಲಕ ಭಾರಿ ಭದ್ರತಾ ವೈಫಲ್ಯ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.
ಶನಿವಾರ ರಾತ್ರಿ 11:30 ರ ವೇಳೆಗೆ ಹರಿಯಾಣ ಮೂಲದ ವ್ಯಕ್ತಿಯೊಬ್ಬ ರನ್‌ವೇಯ ಒಳಗಿರುವುದನ್ನು ಏರ್ ಇಂಡಿಯಾ ಪೈಲಟ್‌ವೊಬ್ಬರು ವಿಮಾನ ಸಂಚಾರ ನಿಯಂತ್ರಣ ಕಚೇರಿಗೆ ತಿಳಿಸಿದ್ದಾರೆ. ತಕ್ಷಣ ಆರೋಪಿಯನ್ನು ವಶಕ್ಕೆ ಪಡೆದ ಕೇಂದ್ರ ಕೈಗಾರಿಕಾ ಮೀಸಲು ಪಡೆಯ ಸಿಬ್ಬಂದಿ ಬಳಿಕ ದೆಹಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.
‘ಅತಿ ಸೂಕ್ಷ್ಮ ವಿಮಾನ ನಿಲ್ದಾಣದಲ್ಲಿ ಉಂಟಾಗಿರುವ ಭದ್ರತಾ ವೈಫಲ್ಯದ ಕುರಿತು ಸಿಐಎಸ್‌ಎಫ್ ತನಿಖೆ ಆರಂಭಿಸಿದ್ದು, ಕರ್ತವ್ಯ ಲೋಪ ಎಸಗಿದ ಆರೋಪದಡಿ ಸಿಐಎಸ್‌ಎಫ್‌ನ ಹೆಡ್‌ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.