ಪಣಜಿ: ದೆಹಲಿಯಿಂದ ಗೋವಾಕ್ಕೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸಹ ಪ್ರಯಾಣಿಕ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಏರ್ ಇಂಡಿಯಾ ವಿಮಾನದಲ್ಲಿ ಮಂಗಳವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.20ರ ನಡುವೆ ಈ ಘಟನೆ ನಡೆದಿದೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.
28 ವರ್ಷದ ಮಹಿಳೆಯ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಆರೋಪಿ, ಹೊದಿಕೆಯನ್ನು ತೆಗೆದುಕೊಳ್ಳುವ ನೆಪದಲ್ಲಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಕೃತ್ಯದ ವೇಳೆ ಆರೋಪಿ ಉದ್ದೇಶಪೂರ್ವಕವಾಗಿಯೇ ಮಹಿಳೆಯ ಪಕ್ಕದಲ್ಲಿ ಹೊದಿಕೆಯನ್ನು ಇರಿಸಿದ್ದ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.
ಗೋವಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುತ್ತಿದ್ದಂತೆ ಪುರುಷನ ವಿರುದ್ಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿಯನ್ನು ಹರಿಯಾಣದ ಪಾನೀಪತ್ ಮೂಲದ ಜಿತೇಂದರ್ ಜಂಗಿಯಾ ಎಂದು ಗುರುತಿಸಲಾಗಿದ್ದು, ಡಾಬೋಲಿಮ್ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.