ಕೊಚ್ಚಿ: ಖಾಸಗಿ ವಿಮಾನದ ಶೌಚಾಲಯದ ಒಳಗೆ ಧೂಮಪಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳದ ತ್ರಿಶ್ಶೂರ್ ನಿವಾಸಿ 62 ವರ್ಷದ ಸುಕುಮಾರನ್ ಅವರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
‘ಜ.29ರಂದು ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
ಜ.29ರಂದು ಇಲ್ಲಿಗೆ ಬಂದಿಳಿದ ಸ್ಪೈಸ್‌ಜೆಟ್ ವಿಮಾನದ ಶೌಚಾಲಯದ ಒಳಗೆ ಸುಕುಮಾರನ್ ಅವರು ಧೂಮಪಾನ ಮಾಡುತ್ತಿರುವುದು ಪತ್ತೆಯಾಗಿತ್ತು. ಬಳಿಕ ಆರೋಪಿಯನ್ನು ಸಿಬ್ಬಂದಿ ವಿಮಾನನಿಲ್ದಾಣದ ಅಧಿಕಾರಿಗಳಿಗೆ ಒಪ್ಪಿಸಿದ್ದರು ಎಂದು ಎಫ್ಐಆರ್‌ನಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.