ಕಸ್ಗಂಜ್(ಉತ್ತರಪ್ರದೇಶ): ಪೊಲೀಸ್‌ಕಾನ್‌ಸ್ಟೆಬಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಧ್ಯ ಮಾಫಿಯಾದ ಕಿಂಗ್‌ಪಿನ್‌ನ ಸಹೋದರ, ಪೊಲೀಸರ ಎನ್‌ಕೌಂಟರ್ ವೇಳೆ ಬುಧವಾರ ಮುಂಜಾನೆ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದರು.
‘ಕಾಳಿ ನದಿಯ ಬಳಿ ಎಲ್ಕಾರ್ ಮತ್ತುಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಎಲ್ಕಾರ್‌ಗೆ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆತ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲೇ ಕೊನೆ ಉಸಿರೆಳೆದಿದ್ದಾನೆ’ ಎಂದು ಕಸ್ಗಂಜ್‌ನ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಸೋನಕರ್ ಅವರು ಮಾಹಿತಿ ನೀಡಿದರು.
‘ಈ ನಡುವೆ ಎಲ್ಕಾರ್ ಸಹಚರರು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಅವರಿಗಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ’ ಎಂದು ಅವರು ಹೇಳಿದರು.
‘ಸಿದ್ದಾಪುರ ಭಾಗದ ನಾಗ್ಲಾ ದೀಮರ್ ಗ್ರಾಮದ ನಿವಾಸಿ ಎಲ್ಕಾರ್ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಈತ ತನ್ನ ಸಹೋದರ ಮೋತಿ ಧೀಮರ್ ಮತ್ತು ಅವನ ಸಹಚರರೊಂದಿಗೆ ನಕಲಿ ಮಧ್ಯ ಮಾರಾಟದ ವ್ಯವಹಾರದಲ್ಲಿ ಭಾಗಿಯಾಗಿದ್ದ’ ಎಂದು ಪೊಲೀಸರು ತಿಳಿಸಿದರು.
‘ಮಂಗಳವಾರ ಸಂಜೆ ಮಧ್ಯ ಮಾಫಿಯಾದ ಕಿಂಗ್‌ಪಿನ್ ಮೋತಿ ಧೀಮರ್‌ನನ್ನು ಬಂಧಿಸಲೆಂದು ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಸಬ್ ಇನ್‌ಸ್ಪೆಕ್ಟರ್ ಒಬ್ಬರುನಾಗ್ಲಾ ದೀಮರ್ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ಥಳಿಸಲಾಗಿದೆ. ಇದರಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ದೇವೇಂದ್ರ ಅವರು ಮೃತಪಟ್ಟಿದ್ದು, ಸಬ್ ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್‌ಗೆ ಗಾಯಗಳಾಗಿವೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಜಿಲ್ಲಾಧಿಕಾರಿ ಚಂದ್ರಪ್ರಕಾಶ್ ಸಿಂಗ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.