ನವದೆಹಲಿ: ದೆಹಲಿ ಪೂರ್ವಭಾಗದ ನಿರ್ಮಾಣ್ ವಿಹಾರ್ ಮೆಟ್ರೊ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ ಸೇಲ್ಸ್‌ಮ್ಯಾನ್ ಒಬ್ಬರು ಮೆಟ್ರೊ ರೈಲಿನ ಮುಂಭಾಗದಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅತುಲ್ ಅಗರ್‌ವಾಲ್ ಎಂದು ಗುರುತಿಸಲಾಗಿದೆ. ರೈಲಿನ ಮುಂಭಾಗ ಬಿದ್ದಿದ್ದ ಅತುಲ್ ಅವರನ್ನು ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅವರು ಮಧ್ಯಾಹ್ನ 1 ಗಂಟೆಯ ವೇಳೆಗೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.