ADVERTISEMENT

ಮುಂಬೈ: 15 ವರ್ಷದ ಬಾಲಕ ಚಲಾಯಿಸುತ್ತಿದ್ದ ಬೈಕ್‌ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಪಿಟಿಐ
Published 24 ಮೇ 2024, 9:36 IST
Last Updated 24 ಮೇ 2024, 9:36 IST
<div class="paragraphs"><p>ಬೈಕ್&nbsp;ಡಿಕ್ಕಿ </p></div>

ಬೈಕ್ ಡಿಕ್ಕಿ

   

ಮುಂಬೈ: ದಕ್ಷಿಣ ಮುಂಬೈನಲ್ಲಿ 15 ವರ್ಷದ ಬಾಲಕ ಚಲಾಯಿಸುತ್ತಿದ್ದ ಬೈಕ್‌ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಇರ್ಫಾನ್ ಶೇಖ್ (32) ಎಂದು ಗುರುತಿಸಲಾಗಿದೆ. 

ADVERTISEMENT

ಕಳೆದ ಐದು ದಿನಗಳ ಹಿಂದೆ ಪುಣೆಯಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಪೋಶೆ ಕಾರು ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದ ಮೂರು ದಿನಗಳ ಬಳಿಕ ಈ ಅಪಘಾತ ಜರುಗಿದೆ.

ಮಜಗಾಂವ್ ಪ್ರದೇಶದಲ್ಲಿ ನಿನ್ನೆ (ಗುರುವಾರ) ಈ ಅಪಘಾತ ಸಂಭವಿಸಿದೆ. ಗಾಯಗೊಂಡಿದ್ದ ಇರ್ಫಾನ್ ಶೇಖ್ ಅವರನ್ನು ಜೆ. ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ಅಪಘಾತವೆಸಗಿದ ಬಾಲಕ ಮತ್ತು ಆತನ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.