ಮುಂಬೈ: ಬುಡಕಟ್ಟು ಸಮುದಾಯದ ಹಿರಿಯ ನಾಯಕ ಭರತ್ ಗವಿತ್ ಕಾಂಗ್ರೆಸ್ ತೊರೆದು, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಭಾನುವಾರ ಸೇರಿದ್ದಾರೆ.
ಕಾಂಗ್ರೆಸ್‌ನಿಂದ ದಾಖಲೆಯ ಒಂಬತ್ತು ಬಾರಿ (1981-2009) ಸಂಸದರಾಗಿದ್ದ ದಿವಂಗತ ಮಾಣಿಕ್‌ರಾವ್ ಗವಿತ್ ಅವರ ಪುತ್ರನಾದ ಭರತ್, ಉತ್ತರ ಮಹಾರಾಷ್ಟ್ರದ ನಂದೂರ್‌ಬಾರ್ ಮತ್ತು ಧುಲೆ ಜಿಲ್ಲೆಗಳಲ್ಲಿ ಪ್ರಭಾವಿಯಾಗಿದ್ದಾರೆ.
ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸುನಿಲ್ ತಟ್ಕರೆ ಅವರ ಸಮ್ಮುಖದಲ್ಲಿ ಭರತ್ ಎನ್‌ಸಿಪಿ ಸೇರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.